Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 85 https://www.AionianBible.org/Bibles/Kannada---Kannada-Bible/Psalms/85 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. 2 ೨) ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. (ಸೆಲಾ) 3 ೩) ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. 4 ೪) ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. 5 ೫) ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? 6 ೬) ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? 7 ೭) ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. 8 ೮) ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9 ೯) ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10 ೧೦) ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11 ೧೧) ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12 ೧೨) ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13 ೧೩) ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. Additional comments?
Refresh Captcha
The world's first Holy Bible un-translation!