Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Zephaniah Chapter 2 https://www.AionianBible.org/Bibles/Kannada---Kannada-Bible/Zephaniah/2 1 ೧) ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ. 2 ೨) ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ. 3 ೩) ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ. 4 ೪) ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು. 5 ೫) ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು. 6 ೬) ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು. 7 ೭) ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು. 8 ೮) ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ. 9 ೯) ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.” 10 ೧೦) ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು! 11 ೧೧) ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು. 12 ೧೨) ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ. 13 ೧೩) ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು. 14 ೧೪) ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು. 15 ೧೫) ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ. Additional comments?
Refresh Captcha
The world's first Holy Bible un-translation!