Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, 1-Chronicles Chapter 4 https://www.AionianBible.org/Bibles/Kannada---Open-Contemporary/1-Chronicles/4 1) ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು. 2) ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್ರದ ಕುಟುಂಬದವರು. 3) ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್ಪೋನೀ ಎಂಬವರು. 4) ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು. 5) ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು. 6) ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು. 7) ಹೆಲಾಹಳ ಪುತ್ರರು: ಚೆರೆತ್, ಇಚ್ಹಾರ್, ಎತ್ನಾನ್. 8) ಕೋಚನು ಅನೂಬ್ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು. 9) ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು. 10) ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು. 11) ಶೂಹನ ಸಹೋದರ ಕೆಲೂಬನು ಎಷ್ಟೋನನ ತಂದೆ ಮೆಹೀರನನ್ನು ಪಡೆದನು. 12) ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು. 13) ಕೆನಾಜನ ಪುತ್ರರು: ಒತ್ನಿಯೇಲನು ಸೆರಾಯನು. ಒತ್ನಿಯೇಲನ ಪುತ್ರರು: ಹತತ್ ಹಾಗು ಮೆಯೋನೋತೈ. 14) ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು. 15) ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್. 16) ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು. 17) ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು. 18) ಇವರು ಮೆರೆದನು ಮದುವೆಯಾದ ಫರೋಹನ ಮಗಳು ಬಿತ್ಯಳ ಮಕ್ಕಳು. ಇದಲ್ಲದೆ ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿ, ಗೆದೋರ್ಯನ ತಂದೆ ಯೆರೆದನನ್ನೂ, ಸೋಕೋವಿನ ತಂದೆ ಹೆಬೆರನನ್ನೂ, ಜಾನೋಹನ ತಂದೆ ಯೆಕೂತೀಯೇಲನನ್ನೂ ಹೆತ್ತಳು. 19) ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು. 20) ಶೀಮೋನನ ಪುತ್ರರು: ಅಮ್ನೋನನು, ರಿನ್ನನು, ಬೆನ್ಹನಾನನು, ತಿಲೋನನು. ಇಷ್ಷೀಯನ ಸಂತತಿ: ಜೋಹೆತನು, ಬೆನ್ ಜೋಹೆತನು. 21) ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು, 22) ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು. 23) ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು. 24) ಸಿಮೆಯೋನನ ವಂಶಜರು: ನೆಮೂಯೇಲನು, ಯಾಮೀನನು, ಯಾರೀಬನು, ಜೆರಹನು ಮತ್ತು ಸೌಲನು. 25) ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು. 26) ಮಿಷ್ಮಾವನ ವಂಶಜರು: ಅವನ ಮಗ ಹಮ್ಮೂಯೇಲನು, ಅವನ ಮಗ ಜಕ್ಕೂರನು, ಅವನ ಮಗನಾದ ಶಿಮ್ಮಿಯಿ. 27) ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ. 28) ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ; 29) ಬಿಲ್ಹದಲ್ಲಿಯೂ ಎಚೆಮಿನಲ್ಲಿಯೂ, ತೋಲಾದ್, 30) ಬೆತೂಯೇಲ್, ಹೊರ್ಮದಲ್ಲಿಯೂ; ಚಿಕ್ಲಗಿನಲ್ಲಿಯೂ; 31) ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು. 32) ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು. 33) ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ: 34) ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, 35) ಯೋಯೇಲನು, ಅಸಿಯೇಲನ ಮಗನಾದ ಸೆರಾಯನ ಮಗ ಯೊಷಿಬ್ಯನ ಮಗ ಯೇಹೂವು. 36) ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯಾ. 37) ಶೆಮಾಯನ ಮಗ ಶಿಮ್ರಿಯ ಮಗ ಯೆದಾಯನ ಮಗ ಅಲ್ಲೋನನ ಮಗ ಶಿಪ್ಫಿಯ ಮಗ ಜೀಜನು. 38) ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು. 39) ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು. 40) ಅವರು ರಸವತ್ತಾದ ಒಳ್ಳೆಯ ಮೇವನ್ನು ಕಂಡುಕೊಂಡರು. ಆ ದೇಶವು ವಿಸ್ತಾರವಾಗಿಯೂ, ಶಾಂತವಾಗಿಯೂ, ಸಮಾಧಾನವಾಗಿಯೂ ಇತ್ತು. ಪೂರ್ವದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು. 41) ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು. 42) ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು. 43) ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ. Additional comments?
Refresh Captcha
The world's first Holy Bible un-translation!