Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, 2-Samuel Chapter 5 https://www.AionianBible.org/Bibles/Kannada---Open-Contemporary/2-Samuel/5 1) ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ. 2) ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’” ಎಂದರು. 3) ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು. 4) ದಾವೀದನು ಆಳಲು ಪ್ರಾರಂಭಿಸಿದಾಗ, ಮೂವತ್ತು ವರ್ಷದವನಾಗಿದ್ದನು. ಅವನು ನಲವತ್ತು ವರ್ಷ ಆಳಿದನು. 5) ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು. 6) ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು. 7) ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು. 8) ಆ ದಿವಸದಲ್ಲಿ ದಾವೀದನು, “ಜಲದ್ವಾರವನ್ನು ದಾಟಿ, ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ನಾಶಮಾಡಲಿ,” ಎಂದು ಹೇಳಿದ್ದನು. ಆದುದರಿಂದಲೇ, “ಕುರುಡರೂ ಕುಂಟರೂ ಅರಮನೆಯೊಳಗೆ ಪ್ರವೇಶಿಸಲಾರರು,” ಎಂಬ ಗಾದೆಯಾಯಿತು. 9) ದಾವೀದನು ಕೋಟೆಯಲ್ಲಿ ವಾಸಮಾಡಿದನು, ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು. 10) ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು. 11) ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು. 12) ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು. 13) ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು. 14) ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್, 15) ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ, 16) ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಇವರೇ. 17) ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು. 18) ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು. 19) ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು. 20) ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು. 21) ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟು ಹೋದುದರಿಂದ ದಾವೀದನೂ, ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು. 22) ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. 23) ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು. 24) ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು. 25) ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು. Additional comments?
Refresh Captcha
The world's first Holy Bible un-translation!