Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, Ezra Chapter 3 https://www.AionianBible.org/Bibles/Kannada---Open-Contemporary/Ezra/3 1) ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು. 2) ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು. 3) ಸುತ್ತಮುತ್ತಲಿನ ಜನರ ಭಯವಿದ್ದರೂ, ಅವರು ಬಲಿಪೀಠವನ್ನು ಅದರ ಅಸ್ತಿವಾರದ ಮೇಲೆ ಕಟ್ಟಿದರು. ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಅರ್ಪಿಸಿದರು. 4) ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು. 5) ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು. 6) ಏಳನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಯೆಹೋವ ದೇವರ ಮಂದಿರದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ. 7) ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು. 8) ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು. 9) ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು. 10) ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು. 11) ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು. 12) ಮೊದಲಿನ ಮಂದಿರವನ್ನು ಕಂಡಿದ್ದ ವೃದ್ಧರಾದ ಯಾಜಕರೂ ಲೇವಿಯ ಅನೇಕ ಕುಟುಂಬಗಳ ಪ್ರಮುಖರೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ಮುಂದೆ ಹಾಕುತ್ತಿರುವಾಗ ದೊಡ್ಡ ಶಬ್ದದಿಂದ ಅತ್ತರು. 13) ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು. Additional comments?
Refresh Captcha
The world's first Holy Bible un-translation!