Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, Ezra Chapter 6 https://www.AionianBible.org/Bibles/Kannada---Open-Contemporary/Ezra/6 1) ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು. 2) ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು: 3) ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ. 4) ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು. 5) ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು. 6) ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ. 7) ದೇವರ ಆಲಯವನ್ನು ಕಟ್ಟುವ ಕೆಲಸಕ್ಕೆ ನೀವು ಅಡ್ಡಿಮಾಡಬೇಡಿರಿ. ಯೆಹೂದ್ಯರ ಅಧಿಪತಿಯೂ, ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ. 8) ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು. 9) ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು. 10) ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು. 11) ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು. 12) ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು. 13) ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು. 14) ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. 15) ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು. 16) ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು. 17) ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು. 18) ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು. 19) ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು. 20) ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು. 21) ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು, 22) ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು. Additional comments?
Refresh Captcha
The world's first Holy Bible un-translation!