Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, Jeremiah Chapter 44 https://www.AionianBible.org/Bibles/Kannada---Open-Contemporary/Jeremiah/44 1) ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು: 2) “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ. 3) ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ. 4) ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು. 5) ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ. 6) ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು. 7) “ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ? 8) ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ? 9) ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ? 10) ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ. 11) “ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ. 12) ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು. 13) ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು. 14) ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು. 15) ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು: 16) “ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು. 17) ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. 18) ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.” 19) ಇದಲ್ಲದೆ, “ನಾವು ಗಗನದ ಒಡತಿಗೆ ಧೂಪ ಸುಟ್ಟು, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ದಾಗ, ನಮ್ಮ ಗಂಡಂದಿರನ್ನು ಬಿಟ್ಟು, ಅವಳ ಪೂಜೆಗೋಸ್ಕರ ದೋಸೆಗಳನ್ನು ಮಾಡಿ, ಅವಳಿಗೆ ಪಾನಾರ್ಪಣೆಗಳನ್ನು ಅರ್ಪಿಸಿದೆವೋ?” ಎಂದರು. 20) ಆಗ ಯೆರೆಮೀಯನು ಜನರೆಲ್ಲರಿಗೂ, ಗಂಡಸರಿಗೂ, ಹೆಂಗಸರಿಗೂ, ತನಗೆ ಉತ್ತರ ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನೆಂದರೆ, 21) “ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ? 22) ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ. 23) ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು. 24) ಇದಲ್ಲದೆ, ಯೆರೆಮೀಯನು ಎಲ್ಲಾ ಜನರಿಗೂ, ಎಲ್ಲಾ ಹೆಂಗಸರಿಗೂ, “ಈಜಿಪ್ಟ್ ದೇಶದಲ್ಲಿರುವ ಯೆಹೂದ್ಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. 25) ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ. 26) ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ. 27) ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು. 28) ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು. 29) “‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ. 30) ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’” Additional comments?
Refresh Captcha
The world's first Holy Bible un-translation!