Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, Lamentations Chapter 1 https://www.AionianBible.org/Bibles/Kannada---Open-Contemporary/Lamentations 1) ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ! 2) ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು. 3) ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು. 4) ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ. 5) ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ. 6) ಚೀಯೋನ್ ಪುತ್ರಿಯ ಎಲ್ಲಾ ವೈಭವವು ಅವಳನ್ನು ಬಿಟ್ಟುಹೋಯಿತು. ಅವಳ ಪ್ರಧಾನರು ಹುಲ್ಲುಗಾವಲು ಕಾಣದ ಜಿಂಕೆಗಳ ಹಾಗಾದರು, ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಓಡಿಹೋದರು. 7) ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು. 8) ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ. 9) ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.” 10) ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ. 11) ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.” 12) ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ. 13) ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ. 14) ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ. 15) ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ. 16) ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ. 17) ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ. 18) ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ. 19) ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು. 20) ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ. 21) ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು. 22) ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ. Additional comments?
Refresh Captcha
The world's first Holy Bible un-translation!